ಭವಾನಿ ರೇವಣ್ಣ ಆಡಿದ ಮಾತುಗಳಿಂದ ಯಾರಿಗಾದರೂ ನೋವಾಗಿದ್ದರೆ ರಾಜ್ಯದ ಜನರಿಗೆ ಪತ್ನಿಯ ಪರವಾಗಿ ನಾನೇ ಕ್ಷಮೆ ಕೇಳುತ್ತೇನೆ ಎಂದು ಹೆಚ್.ಡಿ. ರೇವಣ್ಣ ಹೇಳಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಹೆಚ್‌ಡಿ ರೇವಣ್ಣ, ಬೈಕ್ ಚಾಲಕನಿಗೆ ಹೆಚ್ಚು ಕಡಿಮೆ ಆಗಿದ್ದರೆ ಏನಾಗುತ್ತಿತ್ತು? ಭವಾನಿಯವರು ಏನೂ ಅಹಂಕಾರದ ಮಾತಾಡಿಲ್ಲ. ಭವಾನಿಯವರು ಯಾರದ್ದೋ ಸ್ನೇಹಿತರ ಕಾರಿನಲ್ಲಿ ಹೋಗಿದ್ದರು. ಅವರು ಅಪಘಾತ ಸಂಭವಿಸಿದಾಗ ಸಿಟ್ಟಿನಲ್ಲಿ ಮಾತನಾಡಿದ್ದಾರೆ. ನಮ್ಮ ಕುಟುಂಬ ಯಾರಿಗೂ ನೋವು ಆಗುವ ಕೆಲಸ ಮಾಡಿಲ್ಲ ಎಂದು ಹೇಳಿದರು.
ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು? ಅದರ ವೀಡಿಯೋವನ್ನು ಬೇಕಂತಲೇ ಯಾರೋ ವೈರಲ್ ಮಾಡಿದ್ದಾರೆ. ಅವರು ಬೈಕ್‌ನವನ ಪ್ರಾಣದ ಬಗ್ಗೆ ಮಾತನಾಡಿಲ್ಲ. ಇವರದ್ದೇ ಪ್ರಾಣ ಹೋಗಿದ್ದರೆ ಏನು ಮಾಡುವುದು? ಅದರಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ಬೇಕಿದ್ದರೆ ಭವಾನಿ ಹತ್ತಿರನೂ ಕ್ಷಮೆ ಕೇಳಿಸೋಣ ಬಿಡಿ ಎಂದು ಹೇಳಿಕೆ ನೀಡಿದರು.


