ಚಿಕನ್ ಇಲ್ಲದ ಬಿರಿಯಾನಿ ನೀಡಿದ ತಪ್ಪಿಗಾಗಿ 1000 ರೂ. ಪರಿಹಾರ ಮತ್ತು 150 ರೂ. ಬಿರಿಯಾನಿ ಹಣವನ್ನು ಗ್ರಾಹಕನಿಗೆ ನೀಡುವಂತೆ ಹೋಟೆಲ್ ಮಾಲಿಕನಿಗೆ ಗ್ರಾಹಕರ ನ್ಯಾಯಾಲಯ ಆದೇಶ ನೀಡಿದೆ.
ಕೃಷ್ಣಪ್ಪ ಎಂಬುವವರ ಮನೆಯಲ್ಲಿ ಅಡುಗೆ ಅನಿಲ ಖಾಲಿಯಾಯಿತು. ಹೀಗಾಗಿ ದಂಪತಿ ಐಟಿಐ ಲೇಔಟ್‌ನಲ್ಲಿರುವ ಹೋಟೆಲ್ ಪ್ರಶಾಂತ್‌ಗೆ ತೆರಳಿದರು.
ಹೋಟೆಲ್‌ನಲ್ಲಿ 150 ರೂಪಾಯಿ ಕೊಟ್ಟು ಚಿಕನ್ ಬಿರಿಯಾನಿ ಖರೀದಿಸಿದರು. ದಂಪತಿ ಮನೆಗೆ ಬಂದು ಪಾರ್ಸೆಲ್ ತೆರೆದು ನೋಡಿದಾಗ ಬಿರಿಯಾನಿಯಲ್ಲಿ ಒಂದು ಚೂರು ಮಾಂಸ ಇರಲಿಲ್ಲ.