ಮೈಸೂರು ದಸರಾ ಕೇಂದ್ರ ಬಿಂದುವಾಗಿದ್ದ ಗಜರಾಜ ‘ಅರ್ಜುನ’ ನೆನಪಿನಲ್ಲಿ ರಾಜ್ಯ ಸರಕಾರ ಸ್ಮಾರಕವೊಂದನ್ನು ನಿರ್ಮಾಣ ಮಾಡಲಿದೆ ಎಂದು ವಿಧಾನ ಪರಿಷತ್ತಿನ ಸಭಾನಾಯಕ ಎನ್.ಎಸ್. ಬೋಸರಾಜು ಪ್ರಕಟಿಸಿದ್ದಾರೆ.
ಇಂದು ವಿಧಾನ ಪರಿಷತ್ತಿನ ಕಲಾಪ ಆರಂಭದಲ್ಲಿ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸೇರಿ ಹುತಾತ್ಮರಾದ ಯೋಧರು ಮತ್ತು ಗಜರಾಜ ‘ಅರ್ಜುನ’ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
ಅರ್ಜುನನ್ನು 1968ರಲ್ಲಿ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿತ್ತು. ಅಲ್ಲಿಂದ 22 ವರ್ಷಗಳಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿತ್ತು.


