ಬೆಂಗಳೂರು: ‘ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣ ಮಂಡಳಿ‘ ರಚಿಸುವಂತೆ ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ಆಗ್ರಹಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕರಾದ ಪ್ರಕಾಶರಾಜ್, ಸಮೀರ್ ಬಾಗಲಕೋಟೆ, ಅಬೀದಾ ಬೇಗಂ, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣ ಮಂಡಳಿ‘ ಸ್ಥಾಪಿಸುವ ಭರವಸೆ ನೀಡಿತ್ತು. ಆದರೆ ಈ ಬಗ್ಗೆ ಮಾತನಾಡುತ್ತಿಲ್ಲ ಎಂದರು.


