ಬೆಂಗಳೂರು: ರಾಷ್ಟ್ರದ ಭವಿಷ್ಯ ಯುವಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು.
ಪ್ರತಿ ಚುನಾವಣೆಯಲ್ಲಿಯೂ ತಪ್ಪದೆ ಮತದಾನ ಮಾಡಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.
ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವ ಮತದಾರರ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ಉಳಿಸಲು ನೀವೆಲ್ಲರೂ ನಿಮ್ಮ ಶಕ್ತಿ ಉಪಯೋಗಿಸಬೇಕು. ಬದಲಾವಣೆ ತರುವ ಶಕ್ತಿ ಯುವಸಮೂಹದಲ್ಲಿದೆ ಎಂದರು.


