ಬೆಂಗಳೂರು ಗ್ರಾಮಾಂತರ: ಕುಡಿದ ಮತ್ತಿನಲ್ಲಿ ತಾಯಿಯ ಮೇಲೆ ಹಲ್ಲೆ ನಡೆಸಿದ್ದ ಮಗನನ್ನ ತಂದೆಯೇ ಚಾಕುವಿನಿಂದ ಚುಚ್ಚಿ ಹತ್ಯೆಗೈದಿರುವ ಘಟನೆ ನಡೆದಿದೆ. ಸುರೇಶ ಕೊಲೆಯಾದ ವ್ಯಕ್ತಿ.
ನಾರಾಯಣಪುರದಲ್ಲಿ ತಂದೆ ತಾಯಿ ಹಾಗೂ ಎರಡನೇ ಪತ್ನಿ ಮತ್ತು ಮಕ್ಕಳ ಜೊತೆ ವಾಸವಿದ್ದ ಸುರೇಶ ಪೇಂಟಿಂಗ್ ಕೆಲಸ ಮಾಡುತ್ತಿದ್ದ. ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುವುದು ಈತನ ಹವ್ಯಾಸವಾಗಿತ್ತು. ಅಂದೂ ಕೂಡ ಕುಡಿದು ಬಂದು ತಂದೆ ಹಾಗೂ ತಾಯಿ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಕೋಪದಲ್ಲಿ ಚಾಕುವಿನಿಂದ ಯಲ್ಲಪ್ಪ ಮಗನ ಕುತ್ತಿಗೆಗೆ ಚುಚ್ಚಿದ್ದಾನೆ. ರಕ್ತದ ಮಡುವಿನಲ್ಲಿ ಮನೆಯಿಂದ ಹೊರಗೆ ಓಡಿಬಂದ ಸುರೇಶ್ ನನ್ನು ಹೆಂಡತಿ ಮತ್ತು ಗ್ರಾಮಸ್ಥರು ಆಸ್ಪತ್ರೆಗೆ ಸೇರಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಆರೋಪಿ ಯಲ್ಲಪ್ಪನನ್ನು ಬಂಧಿಸಲಾಗಿದೆ.


