ಕೇರಳ: ಕೇರಳದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ತಿರುವನಂತಪುರಂ ಮೆಡಿಕಲ್ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿನಿಯಾಗಿದ್ದ ಶಹಾನಾ ಮಂಗಳವಾರ ಬೆಳಗ್ಗೆ ಸಂಸ್ಥೆಯ ಬಳಿಯ ಬಾಡಿಗೆ ಅಪಾರ್ಟಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಳು.
ವರನ ಮನೆಯವರು ವರದಕ್ಷಿಣೆಯಾಗಿ 150 ಚಿನ್ನದ ನಾಣ್ಯಗಳು, 15 ಎಕರೆ ಭೂಮಿ ಮತ್ತು ಬಿಎಂಡಬ್ಲ್ಯು ಕಾರಿಗೆ ಬೇಡಿಕೆ ಇಟ್ಟಿದ್ದರು.
ವರದಕ್ಷಿಣೆ ನೀಡದ ಕಾರಣ ಮದುವೆ ರದ್ದುಪಡಿಸಿದ ಕಾರಣಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಹನಾ ಕುಟುಂಬ ಆರೋಪಿಸಿದೆ. ಪೊಲೀಸರು ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.


