ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 19.29 ಲಕ್ಷ ಹೆಣ್ಣು ಮಕ್ಕಳಿಗೆ ‘ಶುಚಿ ಯೋಜನೆ’ ಅಡಿ 2024ರ ಜನವರಿಯಿಂದ ಉಚಿತ ಸ್ಯಾನಿಟರಿ ನ್ಯಾಪ್ ಕಿನ್‌ಗಳನ್ನು ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೊರೊನಾ ಸೇರಿ ವಿವಿಧ ಕಾರಣಗಳಿಂದ 2019-20ರಿಂದ ಸ್ಯಾನಿಟರಿ ನ್ಯಾಪ್ ಕಿನ್ ವಿತರಣೆ ಸ್ಥಗಿತಗೊಂಡಿದ್ದು, ಆ ಯೋಜನೆಗೆ ಇದೀಗ ಮರು ಚಾಲನೆ ನೀಡಲಾಗುತ್ತಿದೆ. ಜನವರಿಯಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ.
10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸಲು ಯೋಜಿಸಲಾಗಿದೆ.
ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗೂ ನ್ಯಾಪ್ ಕಿನ್ ಗಳನ್ನು ವಿತರಿಸಲಾಗುವುದು. ಪ್ರಾಯೋಗಿಕವಾಗಿ ಮೆನ್ ಸ್ಟ್ರುವಲ್ ಮುಟ್ಟಿನ ಕಪ್ ಗಳನ್ನು ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ.


