ಶಾಲೆಯಿಂದ ದೂರ ಉಳಿದ ಮಕ್ಕಳನ್ನು ಮರಳಿ ಶಾಲೆಗೆ ಸೆಳೆಯಲು & ವಿದ್ಯಾಭ್ಯಾಸಕ್ಕಾಗಿ ಅವರಿಗೆ ಅನುಕೂಲ ಕಲ್ಪಿಸುವ ಸಲುವಾಗಿ 2006-07ರಲ್ಲಿ ರಾಜ್ಯ ಸರ್ಕಾರವು ಉಚಿತ ಬೈಸಿಕಲ್ ಯೋಜನೆಯನ್ನು ತಂದಿತ್ತು.
ಶಾಲೆಗೆ ಕಿಲೋ ಮೀಟರ್ ಗಟ್ಟಲೇ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಇದು ಆಸರೆಯಾಗಿತ್ತು. ಆದರೆ, ಸದ್ಯ ಈ ಯೋಜನೆ ಸ್ಥಗಿತಗೊಂಡಿದ್ದು ಸರ್ಕಾರ ಈ ಬಗ್ಗೆ ಚಿಂತಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ.
ಈ ನಡುವೆ ಈ ಯೋಜನೆಯನ್ನು ಆರಂಭಿಸುವುದಾಗಿ ಅಧಿವೇಶನದಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.


