ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಅತಿಥಿ ಶಿಕ್ಷಕನೋರ್ವ ಪೋಲೀಸರ ಅತಿಥಿಯಾಗಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.
ಕಳೆದ 4ನೇ ತಾರೀಖಿನಂದು ವಿದ್ಯುಚ್ಛಕ್ತಿ ಬಿಲ್ ವಸೂಲಿಗೆ ಸಿಬ್ಬಂದಿ ತೆರಳಿದ್ದ ವೇಳೆ ಶಾಲಾ ಕೊಠಡಿಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನ್ನು ಕಂಡು ಈ ವಿಚಾರವನ್ನು ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿಗೆ ತಿಳಿಸಿದ್ದಾರೆ.
ಅತಿಥಿ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


