ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ ಮೇಲೆ ರಾಡ್ ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ನಡೆದಿದೆ. ವಿದ್ಯಾರ್ಥಿ ಅಸೈನ್ಮಂಟ್ ಕಂಪ್ಲೇಟ್ ಮಾಡಿಲ್ಲ ಎಂದು ಏಳನೇ ತರಗತಿ ವಿದ್ಯಾರ್ಥಿಗೆ ರಕ್ತ ಬರುವಂತೆ ಹೊಡೆದಿದ್ದಾರೆ. ಕೈಗೆ ರಾಡ್ ನಲ್ಲಿ ಹೊಡೆದ ಪರಿಣಾಮ ಗಂಭೀರ ಗಾಯವಾಗಿದ್ದು, ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ.
ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಫರ್ದೀನ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ನಡೆದು ಮೂರು ದಿನಗಳಾದರೂ ಶಾಲೆ ಶಿಕ್ಷಕಿಯ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಹಾಗೂ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದೆ ಎಂಬ ಆರೋಪ ಕೇಳಿ ಬರುತ್ತಿದೆ.


