ಬೆಂಗಳೂರು: ನಾದ ಬ್ರಹ್ಮ ಹಂಸಲೇಖ ಅವರ ಹೇಳಿಕೆ ಮುಂದಿಟ್ಟುಕೊಂಡು ಜಾತಿವಾದಿಗಳು ವಿವಾದ ಎಬ್ಬಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಂಸಲೇಖ ಪರವಾಗಿ ಪ್ರತಿಭಟನೆ ನಡೆಯುತ್ತಿದ್ದು, ಈ ಬೆಂಬಲ ಕಂಡು ಭಾವುಕರಾಗಿ ಹಂಸಲೇಖ ಪತ್ರ ಬರೆದಿದ್ದಾರೆ.
ಪೂಜ್ಯ ಕರ್ನಾಟಕವೇ
ನಮಸ್ಕಾರ,
ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೆ ಅಂತ ಇಡೀ ಕರ್ನಾಟಕದಿಂದ ಕರೆ ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ. ಸಹಿಸಿದ್ದೀನಿ. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ.
ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ. ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ.
ಅಭಿಮಾನ ಆವೇಶವಾಗಬಾರದು: ಆವೇಶ ಅವಗಢಗಳಿಗೆ ಕಾರಣವಾಗಬಾರದು! ಅಭಿಮಾನ ಹಾಡಿನಂತೆ ಇರಬೇಕು. ಹಾಡು ಕೇಳಿಸುತ್ತದೆ, ಮುಟ್ಟಿಸುತ್ತದೆ.
ನಿಮ್ಮ ಪ್ರೀತಿ ನನಗೆ ತಲುಪಿದೆ
ನಿಮ್ಮ ಪ್ರೀತಿಗೆ ನನ್ನು ಹೃದಯ ತುಂಬಿದ ನಮಸ್ಕಾರಗಳು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700