ಬಿಜೆಪಿ ಜೊತೆ ಮೈತ್ರಿ ವಿಚಾರದ ಬಗ್ಗೆ ಸಿಎಂ ಇಬ್ರಾಹಿಂ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ನನ್ನ ನಿರ್ಧಾರ ಅಲ್ಲ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಏಕ ಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಈ ಕಾರಣದಿಂದ ದೇವೇಗೌಡರನ್ನು ಉಚ್ಚಾಟನೆ ಮಾಡುವ ನಿರ್ಧಾರ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಇಬ್ರಾಹಿಂ ಪರೋಕ್ಷವಾಗಿ ಸುಳಿವು ನೀಡಿದರು. ಡಿ 11ರಂದು ಜನತಾ ದಳದ ರಾಷ್ಟ್ರೀಯ ಕಾರ್ಯಕಾರಣಿ ಸಮಿತಿ ಸಭೆ ನಡೆಯಲಿದೆ.
5 ಮಂದಿ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಜನವರಿ ನಂತರ ಕ್ಲಿಯರ್ ಪಿಚ್ಚರ್ ಸಿಗಲಿದೆ. ಜೆಡಿಎಸ್ ಬಿಡುವ ಶಾಸಕರ ಸಂಖ್ಯೆ 12 ದಾಟಲಿದೆ. ನಾವು ಆತುರ ಮಾಡಲ್ಲ, ದೇವೇಗೌಡರ- ಕುಮಾರಸ್ವಾಮಿಯವರ ಆರೋಗ್ಯ ಮುಖ್ಯ ಅಂತ ಇಬ್ರಾಹಿಂ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಮೇಲೆ ಸಿಟ್ಟಿಲ್ಲ. ಕಾಂಗ್ರೆಸ್ ನಾಯಕರು ಸಂಪರ್ಕದಲ್ಲೂ ಇಲ್ಲ.


