ಬೆಂಗಳೂರು: ಬ್ಲೂಮ್‌ಬರ್ಗ್ ಫಿಲಾಂತ್ರಪಿಸ್ ಇನೀಶಿಯೇಟಿವ್ ಹಾಗೂ ಡಬ್ಲ್ಯುಆರ್ ಐ ಇಂಡಿಯಾ ಸಹಭಾಗಿತ್ವದಲ್ಲಿ 2 ದಿನಗಳ ಕಾಲ ಬಿಬಿಎಂಪಿ ಕೇಂದ್ರ ಕಚೇರಿ ಡಾ.ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ನಡೆದ ನಮ್ಮ ರಸ್ತೆ ಪ್ರದರ್ಶನ ಕಾರ್ಯಾಗಾರ ನಡೆಯುತ್ತಿದೆ. ಈ ಕಾರ್ಯಾಗಾರಕ್ಕೆ ತುಷಾರ್ ಗಿರಿನಾಥ್ ಅವರು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಾಗಾರವನ್ನು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆಯ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ ಬಂದಂತಹ ಉತ್ತಮ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಿದರು.


