ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15ವರೆಗೆ) ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.


