ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳಾಯ್ತು. ಉತ್ತರ ಕರ್ನಾಟಕ ಭಾಗಕ್ಕೆ ಒಂದೇ ಒಂದು ರೂಪಾಯಿಯನ್ನು ಸರ್ಕಾರ ನೀಡಿಲ್ಲ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣೆಗೂ ಮುನ್ನಾ ಗ್ಯಾರೆಂಟಿಗಳನ್ನು ಘೋಷಿಸಿದೆ. ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡುವುದರಲ್ಲಿ ಸರ್ಕಾರ ವಿಫಲವಾಗಿದೆ. ಅದು ಬೇರೆ. ಆದ್ರೆ ಇತ್ತ ಉತ್ತರ ಕರ್ನಾಟಕಕ್ಕೆ ಒಂದೇ ಒಂದು ರೂಪಾಯಿ ನೀಡಿಲ್ಲ ಎಂದು ಅಶೋಕ್ ಆರೋಪಿಸಿದ್ದಾರೆ.


