ಈರುಳ್ಳಿ ನಂತರ ಬೆಳ್ಳುಳ್ಳಿ ಬೆಲೆಯಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 300 ರಿಂದ 400 ರೂ.ಗೆ ತಲುಪಿದೆ. ಒಂದು ತಿಂಗಳ ಹಿಂದೆ ಚಿಲ್ಲರೆ ಬೆಲೆ ಕೆಜಿಗೆ 200 ರಿಂದ 250 ರೂಪಾಯಿ ಇತ್ತು. ಈ ವರ್ಷ ಬೆಳ್ಳುಳ್ಳಿ ಬೆಳೆ ಕೈಕೊಟ್ಟಿದ್ದರಿಂದ ಬೆಲೆ ಏರಿಕೆಯಾಗಿದೆ.
ಬೆಳ್ಳುಳ್ಳಿ ಬೆಲೆ ಏರಿಕೆಗೆ ಮೊದಲನೆಯ ಕಾರಣ ಹವಾಮಾನ ವೈಪರೀತ್ಯದಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದೆ. ಎರಡನೆಯ ಕಾರಣ ಬೆಳ್ಳುಳ್ಳಿಯ ಕಡಿಮೆ ಉತ್ಪಾದನೆಯಿಂದಾಗಿ ಬೆಲೆ ಏರಿಕೆಯಾಗಿದೆ.


