ಶಿಕ್ಷಣ ಸಚಿವ ಮಧು ಬಂಗಾರಪ್ಪ ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ ಸರ್ಕಾರ ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ.
ಆದ್ರೆ ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಮಕ್ಕಳಿಗೆ ಶೂ, ಸಾಕ್ಸ್, ಸಮವಸ್ತ್ರಕ್ಕೆ 100 ರೂ. ಕೊಡ್ತಿದ್ದಾರೆ. ಖರ್ಚೀಫ್ ಗೆ ಕೊಡುವಷ್ಟು ಹಣ ಕೊಡ್ತಿದ್ದಾರೆ. ಇಷ್ಟು ಹಣ ಶೂ, ಸಾಕ್ಸ್, ಸಮವಸ್ತ್ರಕ್ಕೆ ಸಾಕಾಗುತ್ತದೆಯೇ? ಶೂ, ಸಾಕ್ಸ್ ಹಣ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದರು.


