ಬೆಳಗಾವಿ: ಕರ್ನಾಟಕದಲ್ಲಿ ಭ್ರೂಣ ಮತ್ತೆ ಹಾಗೂ ಹತ್ಯೆ ಪ್ರಕರಣ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲೂ ಪ್ರತಿಧ್ವನಿಸಿದೆ. ಪರಿಷತ್ ನಲ್ಲಿಂದು ಗಮನ ಸೆಳೆಯುವ ಸೂಚನೆ ವೇಳೆ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಸ್ತಾಪಿಸಿದ್ದು, ಕೊಲ್ಲುವಾಗ ಭ್ರೂಣ ಅಮ್ಮಾ ಅಮ್ಮಾ ಎಂದು ಕೂಗುತ್ತೆ. ಮಗು ನನ್ನ ಕಾಪಾಡಿ ಎಂದು ಕೂಗತ್ತೆ. ಆದರೆ ಕೇಳುವುದಕ್ಕೆ ಧ್ವನಿನೇ ಇಲ್ವಲ್ಲಾ ಎಂದು ಹೇಳುತ್ತಾ ಗದ್ಗದಿತರಾದರು.
ಗಮನ ಸೆಳೆಯುವ ಸೂಚನೆ ಅಡಿ ಭ್ರೂಣ ಹತ್ಯೆ ವಿಚಾರ ಪ್ರಸ್ತಾಪಿಸಿದ ಉಮಾಶ್ರೀ, ಹೆಣ್ಣು ಬ್ರೂಣ ಹತ್ಯೆ ನಿರಾತಂಕವಾಗಿ ನಡೆಯುತ್ತಿದೆ. ಕೊಲ್ಲಲು ಮಚ್ಚು ಇನ್ನೊಂದು ಬೇಕಿಲ್ಲ, ಕೇವಲ ಯಂತ್ರದ ಮೂಲಕ ಭ್ರೂಣ ತೆಗೆದು ಹತ್ಯೆ ಮಾಡಲಾಗುತ್ತಿದೆ. ಹೆಣ್ಣು ಇಲ್ಲದೆ ವರ್ತಮಾನ, ಭೂತ, ಭವಿಷ್ಯ ಇಲ್ಲ. ಪರೀಕ್ಷೆ ಮಾಡಿ ಹೆಣ್ಣು ಭ್ರೂಣವನ್ನು ತೆಗೆದಾಗ ಇನ್ನೂ ಹೃದಯ ಮಿಡಿಯುತ್ತಲೇ ಇರುತ್ತೆ. ಆದರೆ ಅದನ್ನ ತೆಗೆದುಕೊಂಡು ಹೋಗಿ ಕಾವೇರಿ ಒಡಲಿಗೆ ಸೇರಿಸುತ್ತಾರೆ. ಇದನ್ನು ತಡೆಗೆ ಕಠಿಣ ಕಾನೂನು ಇಲ್ಲ. ಹಾಗಾಗಿ ಇದು ನಡೆಯುತ್ತಿದೆ ಎಂದು ಕಣ್ಣೀರಿಟ್ಟರು.


