ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ದೇವವೃಂದ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದ ಒಂದು ದಿನದ ನಂತರ ಗೋಣಿಬೀಡು ಪೊಲೀಸರು ಆಕೆಯ ಪತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಅನೈತಿಕ ಸಂಬಂಧದ ಕಾರಣದಿಂದ ತನ್ನ ಸೋದರ ಮಾವ ತನ್ನ ಸಹೋದರಿಯನ್ನು ಕೊಂದಿದ್ದಾನೆ ಎಂದು ಸಂತ್ರಸ್ತೆಯ ಸಹೋದರ ದೂರು ದಾಖಲಿಸಿದ್ದರು. ಮೃತರನ್ನು 31 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಪತಿ ದರ್ಶನ್ ಪೂಜಾರಿ ಹಾಗೂ 4 ವರ್ಷದ ಮಗನನ್ನು ಅಗಲಿದ್ದಾರೆ.
ಶ್ವೇತಾ ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.


