ಕಾಂತಾರ ‘ಚಾಪ್ಟರ್ 1′ ಚಿತ್ರದಲ್ಲಿ ನಟಿಸೋಕೆ ಕಲಾವಿದರು ಬೇಕಾಗಿದ್ದಾರೆ ಎಂದು ಹೊಂಬಾಳೆ ಫಿಲ್ಡ್ ಪೋಸ್ಟರ್ ಹಂಚಿ ಕೊಂಡಿದೆ. ಪುರುಷರ ವಯಸ್ಸು 30ರಿಂದ 60 ವರ್ಷ ಅಂತರದಲ್ಲಿ ಹಾಗೂ ಮಹಿಳೆಯರ ವಯಸ್ಸು 18ರಿಂದ 60 ವರ್ಷ ಅಂತರದಲ್ಲಿ ಇರಬೇಕು. ನೋಂದಣಿ ಮಾಡಲು kantara.film ಗೆ ಭೇಟಿ ನೀಡಬೇಕು. ಡಿಸೆಂಬರ್ 14ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ.
ರೀಲ್ಸ್ ಮತ್ತು ಅವುಗಳನ್ನೇ ಹೋಲುವ ವಿಡಿಯೋಗಳಿದ್ದರೆ ಅದನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೊಂಬಾಳೆ ಫೀಲ್ಡ್ ಕಟ್ಟುನಿಟ್ಟಾಗಿ ಹೇಳಿದೆ. ನಟನೆಯಲ್ಲಿ ಆಸಕ್ತಿ ಹೊಂದಿರುವವರು ಅವಕಾಶ ಸದುಪಯೋಗ ಮಾಡಿಕೊಳ್ಳಿ.


