ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ 9, 461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿದಿದ್ದಾರೆ. ಇವುಗಳಿಂದ ಈ ಪ್ರದೇಶದಲ್ಲಿ 3538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ ಎಂದರು.
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34, 115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13, 308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ 13, 911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ. ಫಾಕ್ಸ್ಕಾನ್, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ.


