ಬೆಂಗಳೂರು : ರಾಜಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಆಂಧ್ರದ ಚಿತ್ತೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಬಾಸ್ಕರ್ ಬಂಧಿತ ಆರೋಪಿ.
ವೃತ್ತಿಯಲ್ಲಿ ರೈತನಾಗಿರುವ ಭಾಸ್ಕರ್ ಸೋಮವಾರ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದ. ನಂತರ ವಾಪಸ್ಸು ಕೋಲಾರಕ್ಕೆ ತೆರಳುವ ವೇಳೆ ರಾಜಭವನಕ್ಕೆ ಹುಸಿ ಬಾಂಬ್ ಬೆದರಿಕೆ ಮಾಡಿದ್ದ.
ಘಟನೆ ಸಂಬಂಧ ವಿಧಾನಸೌಧ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


