nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿಯಲ್ಲಿ ವಿಮಾನ ನಿಲ್ದಾಣವಾದರೆ ಶ್ರೀ ಹನುಮಾನ್ ಎಂದು ನಾಮಕರಣ ಮಾಡಲಿ: ಗಾಲಿ ಜನಾರ್ದನ ರೆಡ್ಡಿ
    ರಾಜ್ಯ ಸುದ್ದಿ December 14, 2023

    ಬಳ್ಳಾರಿಯಲ್ಲಿ ವಿಮಾನ ನಿಲ್ದಾಣವಾದರೆ ಶ್ರೀ ಹನುಮಾನ್ ಎಂದು ನಾಮಕರಣ ಮಾಡಲಿ: ಗಾಲಿ ಜನಾರ್ದನ ರೆಡ್ಡಿ

    By adminDecember 14, 2023No Comments2 Mins Read
    gali janardhana reddi

    ಬೆಳಗಾವಿ: ಅಯೋಧ್ಯೆಯಲ್ಲಿ ಶ್ರೀರಾಮ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಇದೆ. ಬಳ್ಳಾರಿ ಏರ್‌ಪೋರ್ಟ್ ಆದರೆ ಅದಕ್ಕೆ ಶ್ರೀ ಹನುಮಾನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಅಂತ ನಾಮಕರಣ ಮಾಡಲಿ ಅಂತಾ ನನ್ನ ಆಸೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣಗಳಲ್ಲಿ ಏರ್ ಬಸ್ ​ಗಳು ಇವತ್ತು ಬರುತ್ತಿವೆ ಅಂದರೆ ನಾನು ಮಾಡಿದ ಕೆಲಸ ಕಾರಣ. ದುರಾದೃಷ್ಟ ಅಂದರೆ ನಾನು ಹುಟ್ಟಿ ಬೆಳೆದ ಬಳ್ಳಾರಿಯಲ್ಲಿ ಇದುವರೆಗೆ ಏರ್‌ ಪೋರ್ಟ್ ಆಗಿಲ್ಲ ಎಂದರು.

    ವಿಜಯನಗರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಹೆಸರಲ್ಲಿ ನಾನು ಜೂವಾಲಾಜಿಕಲ್ ಪಾರ್ಕ್ ಕಟ್ಟಿದ್ದೆ. ಅಲ್ಲಿ ನೈಟ್ ಸಫಾರಿ, ಥೀಮ್ ಪಾರ್ಕ್, ಶ್ರೀಕೃಷ್ಣದೇವರಾಯನ ಪ್ರತಿಮೆಯನ್ನು ಇಂಗ್ಲೆಂಡಿನ ಲೇಡಿ ಲಿಬರ್ಟಿ ಪ್ರತಿಮೆ ತರಹ ಮಾಡಬೇಕೆಂಬ ಆಸೆ ಇತ್ತು. ತುಂಗಭದ್ರ ನದಿಯಲ್ಲಿ ಸೌಂಡ್ ಅಂಡ್ ಲೈಟ್ ಮಾಡಬೇಕೆಂಬ ಆಸೆ ಇತ್ತು. ಇವೆಲ್ಲಾ ಕನಸುಗಳನ್ನು 13-14 ವರ್ಷಗಳ ಹಿಂದೆಯೇ ನಾನು ಕಂಡಿದ್ದೆ. ಈಗಿನ ಸರ್ಕಾರ ಈ ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಎಂದರು.


    Provided by
    Provided by

    ಬಳ್ಳಾರಿಗೆ ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಅಂತ ಎದೆ ಮೇಲೆ ಕೈ ಇಟ್ಟು ಮಾತಾಡಲಿ. ರಾಜಕೀಯಕ್ಕಾಗಿ ವಿರೋಧ ಮಾಡುವವರು ಮಾಡಬಹುದು. ಅವರು ಮನೆಯಲ್ಲಿ ಹೋಗಿ ಬಳ್ಳಾರಿ ಅಭಿವೃದ್ಧಿಗೋಸ್ಕರ ಜನಾರ್ದನ ರೆಡ್ಡಿ ಕೆಲಸ ಮಾಡಿದ್ದಾನೋ ಇಲ್ಲವೋ ಅಂತಾ ದೇವರ ಮುಂದೆ ಕೇಳಿಕೊಳ್ಳಲಿ ಎಂದರು.

    ನಾನು ಹೇಳಿದ್ದನ್ನು ತಪ್ಪಾಗಿ ಅರ್ಥ ಮಾಡಿಕೊಂಡರೆ ಅದು ಅವರ ಕರ್ಮ. ನನ್ನ ವಿರುದ್ಧ ಗಣಿ ಕೇಸ್​ಗಳನ್ನು ಹಾಕಲಾಗಿದೆ. ನ್ಯಾಯಾಲಯ ಇದೆ, ನಾನು ಪ್ರಕರಣಗಳಿಗೆ ಹೆದರುವುದಿಲ್ಲ ಎಂದರು. ಸರ್ಕಾರ ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಮಾಡಬೇಕು. ಬಳ್ಳಾರಿಯಲ್ಲಿ ಅಂತರಾಷ್ಟ್ರೀಯ ಸ್ಟೇಡಿಯಂ ಕಟ್ಟಬೇಕಿದೆ. ಸರ್ಕಾರ ಈ ವಿಷಯದಲ್ಲಿ ಗಮನ ಕೊಡಲಿ ಎಂದರು.

    ಬಳ್ಳಾರಿಯಲ್ಲಿ ಮೈನಿಂಗ್ ಟ್ಯಾಕ್ಸ್​ ನಿಂದ 17 ಸಾವಿರ ಕೋಟಿ ಸಂಗ್ರಹ ಆಗಿದೆ. ಈ‌ ಹಣ ಬಳ್ಳಾರಿ ಅಭಿವೃದ್ಧಿಗೆ ಬಳಕೆ ಮಾಡಬೇಕು ಅಂತ ಕೋರ್ಟ್ ಆದೇಶ ಆಗಿದೆ. ಇದರ ಬಗ್ಗೆ ಕೋರ್ಟಿನಲ್ಲಿ ಗಣಿ ಮಾಲೀಕರು 13 ವರ್ಷಗಳಿಂದ ಹೋರಾಟ ಮಾಡಿದ್ದಾರೆ. ಈಗ ಆ ಹಣ 24 ಸಾವಿರ ಕೋಟಿ ಆಗಿದೆ. ಈ ಹಣದಿಂದ ಬಳ್ಳಾರಿ ಅಭಿವೃದ್ಧಿ ಮಾಡಬಹುದು ಎಂದರು.

    ರಾಜ್ಯ ಸರ್ಕಾರದ ಮೇಲೆ‌ ಭಾರ ಹಾಕುವ ಬದಲು ಬಳ್ಳಾರಿ ಶಾಸಕರು ಬಳ್ಳಾರಿ ಅಭಿವೃದ್ಧಿಗೆ ಪ್ಲಾನ್ ಮಾಡಿ. ನನಗೆ ಕ್ರೆಡಿಟ್ ಕೊಡುವುದು ಬೇಡ. ನಿಮಗೆ ಒಳ್ಳೆಯದು ಮಾಡಿ ಅಂತ ಹೇಳುತ್ತಿದ್ದೇನೆ ಅಷ್ಟೆ. ನನಗೆ ಬಳ್ಳಾರಿಗೆ ಪ್ರವೇಶಕ್ಕೆ ಅವಕಾಶವೇ ಇಲ್ಲ, ನನಗೆ ಕ್ರೆಡಿಟ್ ಬೇಡ ಎಂದರು.

     

    admin
    • Website

    Related Posts

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.