nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರೀಡೆಯಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಡಾ. ಗುರುದತ್ತ ಕೋರಿ
    ರಾಜ್ಯ ಸುದ್ದಿ December 19, 2023

    ಕ್ರೀಡೆಯಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಡಾ. ಗುರುದತ್ತ ಕೋರಿ

    By adminDecember 19, 2023No Comments1 Min Read
    bagalakote

    ಬಾಗಲಕೋಟೆ: ಕ್ರೀಡಾ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದರಿಂದ ಯುವಕರಲ್ಲಿ ಕ್ರೀಡಾಸಕ್ತಿ ಹೆಚ್ಚಿಸುವುದರ ಜೊತೆಗೆ ದೈಹಿಕ ಶಿಕ್ಷಕರಿಗೆ ಪುನಶ್ಚೇತನ ನೀಡಲು ಸಹಕಾರಿಯಾಗುತ್ತವೆ ಎಂದು ನಿವೃತ್ತ ಪ್ರಾಚಾರ್ಯ ಡಾ. ಗುರುದತ್ತ ಜಿ.ಕೋರಿ ಹೇಳಿದರು.

    ನಗರದ ಬಿವಿವಿ ಸಂಘದ, ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ ಖೋ–ಖೋ ಕ್ರೀಡೆಯ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಕ್ರೀಡೆಯು ವ್ಯಕ್ತಿತ್ವ ವಿಕಸನಕ್ಕೆ ಒಂದು ರಹದಾರಿಯಾಗಿದ್ದು ಯುವಜನತೆ ಇತ್ತ ವಾಲುವಂತೆ ಮಾಡುವುದು ದೈಹಿಕ ಶಿಕ್ಷಕರ ಕೈಯಲ್ಲಿದೆ. ಅವರು ನಾಲ್ಕು ಗೋಡೆಗಳ ಮಧ್ಯೆ ಉಪಾನ್ಯಾಸದಲ್ಲಿ ಕಾಲ ಕಳೆಯದೆ ಆಟದ ಮೈದಾನದತ್ತ ಹೆಜ್ಜೆ ಹಾಕಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹ ನೀಡಬೇಕು ಎಂದರು.

    ಬದಲಾಗುತ್ತಿರುವ ಜಗತ್ತಿನಲ್ಲಿ ಕ್ರೀಡಾ ಹವ್ಯಾಸವು ಬದಲಾಗುತ್ತಿದ್ದು ಹೊಸ ಅಭಿರುಚಿಗಳೊಂದಿಗೆ ಕ್ರೀಡಾಸಕ್ತಿ ಬೆಳೆಸಿಕೊಂಡರೆ ಮಾತ್ರ ಸಾಧನೆ ಸಾಧ್ಯ. ಇಂತಹ ಕ್ರೀಡಾ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದರಿಂದ ಕ್ರೀಡೆಗಳ ಪರಿಚಯದ ಜೊತೆಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ಸಾಧ್ಯವಾಗುತ್ತದೆ. ಸರಕಾರವು ಕೂಡ ಇಂತಹ ಕಾರ್ಯಾಗಾರಗಳನ್ನು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ನಡೆಸಬೇಕು ಎಂದರು.

     ರಾಜ್ಯ ಖೋ–ಖೋ ಅಮೇಚೂರ ಪೇಡರೇಶನ್ ಕಾರ್ಯದರ್ಶಿಗಳಾದ ಪಿ.ಚಿನ್ನಮೂರ್ತಿ ಮಾತನಾಡಿ, ಖೋಖೋ ಹಳ್ಳಿಗಳಲ್ಲಿ ಹುಟ್ಟಿದ ಕ್ರೀಡೆಯಾದರೂ ತನ್ನದೇ ಆದ ಪ್ರಾಧಾನ್ಯತೆಯ ಮೂಲಕ ಕ್ರೀಡಾಕ್ಷೇತ್ರದಲ್ಲಿ ಮಹತ್ವವನ್ನು ಪಡೆದುಕೊಂಡಿದೆ. ಕಾಲ ಬದಲಾದಂತೆ ಖೋಖೋದಲ್ಲಿ ನಿಯಮಗಳು ಬದಲಾಗುತ್ತಾ ಬಂದಿದ್ದು, ದೈಹಿಕ ಶಿಕ್ಷಕರು ಅವುಗಳನ್ನು ಅನುಸರಿಸಬೇಕು ಎಂದರು.

     ಪ್ರಾಚಾರ್ಯರಾದ ಪ್ರೊ. ಎಸ್.ಎಸ್ ಬಿರಾದಾರ ಮಾತನಾಡಿ, ಕ್ರೀಡಾ ಕಾರ್ಯಾಗಾರವು ಪ್ರತಿ ದೈಹಿಕ ಶಿಕ್ಷಕನ ಉನ್ನತಿಗೆ ಸಹಾಯಕಾರಿಯಾಗಿವೆ. ಅಲ್ಲದೇ ಇಂತಹ ಕಾರ್ಯಾಗಾರಗಳನ್ನು ಬರುವ ದಿನಗಳಲ್ಲಿ ಮತ್ತಷ್ಟು ವಿವಿಧ ಕ್ರೀಡೆಗಳ ಮೇಲೆ ಮಹಾವಿದ್ಯಾಲಯದಲ್ಲಿ ಸಂಘಟಿಸಲಾಗುವುದು ಎಂದರು.

    ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣದ ಪರಿವೀಕ್ಷಕರಾದ ಆರ್.ಆರ್ ಪಾಟೀಲ ಹಾಗೂ ಐಕ್ಯೂಎಸಿ ಸಂಯೋಜಕರಾದ ಡಾ. ಎಸ್. ಸಿ. ನಾಗರಬೆಟ್ಟ, ಸಂಘಟನಾ ಕಾರ್ಯದರ್ಶಿ ಪ್ರೊ. ಆರ್. ವಾಯ್ ಅಂಕಲಗಿ ಸೇರಿದಂತೆ ವಿವಿಧ ಸರಕಾರಿ & ಅರೆಸರಕಾರಿ ಶಾಲೆಗಳಿಂದ ಆಗಮಿಸಿದ ದೈಹಿಕ ಶಿಕ್ಷಕರು, ದೈಹಿಕ ನಿರ್ದೇಶಕರು ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರೊ. ಎಸ್.ಆರ್ ಗೌಡರ ನಿರೂಪಿಸಿದರು.


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.