ಚಿಕ್ಕಬಳ್ಳಾಪುರ: ಪ್ರೇಮಿಗಳು ಓಡಿ ಹೋಗಿ ಮದುವೆ ಮಾಡಿಕೊಂಡ ಕಾರಣ ಯುವತಿಯ ಕಡೆಯವರು ಯುವನ ತಂದೆ ತಾಯಿ ಮೇಲೆ ಮಾರಣಾಂತಿಕವಾಗಿ ಹೊಡೆದು ಗಾಯಗೊಳಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದಲ್ಲಿ ಘಟನೆ ನಡೆದಿದೆ.
ಯುವಕ, ಯುವತಿ ಅಕ್ಕ-ಪಕ್ಕದ ನಿವಾಸಿಗಳಾಗಿದ್ದು, ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸಿ ಕೆಲವು ದಿನಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದರು. ಇವರ ಮದುವೆಗೆ ಯುವತಿಯ ಮನೆಯವರು ತೀವ್ರ ವಿರೋದ ವ್ಯಕ್ತಪಡಿಸಿದ ಕಾರಣ ಗ್ರಾಮಸ್ಥರು ನ್ಯಾಯ ಪಂಚಾಯತಿ ಮಾಡಿ ಯುವತಿಯನ್ನು ತಂದೆ ತಾಯಿ ಜೊತೆ ಮನೆಗೆ ಕಳುಹಿಸಿ ಕೊಟ್ಟಿದ್ದರು.
ಆದ್ರೆ, ಇಬ್ಬರೂ ಮತ್ತೆ ಒಂದುಗೂಡಿ ಮನೆಯಿಂದ ಎಸ್ಕೇಪ್ ಆಗಿದ್ದರು. ಇದರಿಂದ ಕೋಪಗೊಂಡ ಯುವತಿಯ ಕಡೆಯವರು ಯುವಕನ ತಂದೆ ತಾಯಿ ಇದ್ದ ಮನೆಯ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.


