ಬೆಂಗಳೂರು: ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿ 25 ಲಕ್ಷ ರೂ. ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಡ್ಯದ ಅವಿನಾಶ್, ಹಾಸನದ ಶಶಿ ಕುಮಾರ್, ರಾಹುಲ್ ಬಂಧಿತ ಆರೋಪಿಗಳು. ಪೊಲೀಸರು ಗಸ್ತಿನಲ್ಲಿದ್ದಾಗ ನಂಬರ್ ಪ್ಲೇಟ್ ಇಲ್ಲದ ಬಜಾಜ್ ಪಲ್ಸರ್ ಬೈಕ್ ನಿಲ್ಲಿಸಿಕೊಂಡು ಅನುಮಾನಸ್ಪದವಾಗಿ ವರ್ತಿಸುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ವಿಚಾರಣೆಗೊಳಪಡಿಸಿದಾಗ ಸತ್ಯಾಂಶ ಬಯಲಾಗಿದೆ.


