ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ, ಈವರೆಗೂ ಬೆಂಗಳೂರಿನಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದೆ. ಚಾಮರಾಜಪೇಟೆಯ 64 ವರ್ಷದ ವೃದ್ಧ ಡಿಸೆಂಬರ್ 15 ರಂದು ಮೃತಪಟ್ಟಿದ್ದು, ಇವರನ್ನು ಸೇರಿದಂತೆ ಜಯದೇವ ಆಸ್ಪತ್ರೆಯಲ್ಲಿ ಒಬ್ಬರು, ಹೆಬ್ಬಾಳದ ಸಿಎಂಆರ್ ಆಸ್ಟರ್ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಇಂದು ಸಿಎಂ ಸಿದ್ಧರಾಮಯ್ಯರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 1 ಘಂಟೆಗೆ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾವು ಅದನ್ನು ಎದುರಿಸಲು ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಇನ್ನು ಇಂದಿನಿಂದ ರಾಜ್ಯದಲ್ಲಿ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುವುದು ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.


