ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ರೌಡಿಶೀಟರ್ ಅನಿಲ್ ಕುಮಾರ್, ಯಶವಂತಪುರ ರೌಡಿಶೀಟರ್ ಗಿರೀಶ್ ಅಲಿಯಾಸ್ ರಾಬರಿ ಗಿರಿ, ವಿವೇಕನಗರ ರೌಡಿಶೀಟರ್ ಗಳಾದ ನಾರಾಯಣ, ಹೇಮಂತ್, ರಾಮು, ಸೋಲದೇವನಹಳ್ಳಿ ರೌಡಿಶೀಟರ್ ತಿಮ್ಮ ಸೇರಿ ಅನೇಕರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತಕಾರಾರು ಆಸ್ತಿಪತ್ರ, ಹಲವು ಚೆಕ್ ಗಳು ಪತ್ತೆಯಾಗಿವೆ.
ಅಮಾಯಕರಿಗೆ ಬೆದರಿಸಿ ನಿವೇಶನ ಕಬಳಿಸಿರುವ ದೂರು ಕೇಳಿ ಬಂದಿತ್ತು. ಅಷ್ಟೇ ಅಲ್ಲದೆ ಮೀಟರ್ ಬಡ್ಡಿ ವ್ಯವಹಾರದ ಶಂಕೆ ಕೂಡ ವ್ಯಕ್ತವಾಗಿತ್ತು


