ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸೋಂಕಿನಿಂದ ಯಾರಾದರೂ ಮೃತಪಟ್ಟರೆ ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡಲು ಪಾಲಿಕೆ ತಯಾರಿ ನಡೆಸಿದೆ. ನಗರದ 12 ವಿದ್ಯುತ್ ಚಿತಾಗಾರಗಳ ಪೈಕಿ 4 ಚಿತಾಗಾರ ಮೀಸಲಿಡಲಾಗಿದೆ. ಹಿಂದಿನ ಅಲೆಗಳ ವೇಳೆ ಅಂತ್ಯ ಸಂಸ್ಕಾರಕ್ಕೆ ಚಿತಾಗಾರಕ್ಕೆ ತೀವ್ರ ಸಮಸ್ಯೆ ಉಂಟಾಗಿತ್ತು. ಹೀಗಾಗಿ ಸಿಎಂ ಸೂಚನೆ ಹಿನ್ನೆಲೆ ಬಿಬಿಎಂಪಿ ತಯಾರಿ ಕೈಗೊಂಡಿದೆ. ಶವ ಒಯ್ಯಲು 8 ವಲಯಕ್ಕೆ 1 ತಲಾ ಆ್ಯಂಬುಲೆನ್ಸ್ ಮೀಸಲು ಇರಿಸಿದೆ.
ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹೆಚ್ಚಳ ಹಿನ್ನೆಲೆ ಬಿಬಿಎಂಪಿ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದೆ. ಇದೀಗ ಖಾಸಗಿ ಆಸ್ಪತ್ರೆ ಜೊತೆ ಬಿಬಿಎಂಪಿ ಅಧಿಕಾರಿಗಳು ಹೈವೊಲ್ವೇಜ್ ಮೀಟಿಂಗ್ ನಡೆಸಲಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ. ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸಲಿದ್ದಾರೆ. 3 ತಿಂಗಳಿಗೆ ಆಗುವಷ್ಟು ಬೆಡ್, ಆಕ್ಸಿಜನ್, ವೆಂಟಿಲೇಟರ್ ಬಗ್ಗೆ ಚರ್ಚೆ ನಡೆಸಿದೆ.


