ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ಕ್ಲಬ್ ಮಾಲೀಕ ಸೇರಿದಂತೆ 100ಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅಡಿಗ ಎಂಬಾತ ನಡೆಸುತ್ತಿದ್ದ ಇಸ್ಪೀಟ್ ಕ್ಲಬ್ ಮೇಲೆ ವಿಜಯನಗರ ಎಸಿಪಿ ಚಂದನ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಪದೇ ಪದೇ ಕ್ಲಬ್ ಓಪನ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿದ್ದ ಹಿನ್ನಲೆ ಇಂದು ಮತ್ತೆ ರೇಡ್ ಮಾಡಲಾಗಿದೆ. ಈ ಕುರಿತು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


