ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವ ಚಿನ್ನಾಭರಣವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹ 2 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಎಫ್ ಐಆರ್ ದಾಖಲಾಗಿದೆ.
ಚಹಾ ಅಂಗಡಿ ಮಾಲೀಕರಾಗಿರುವ 44 ವರ್ಷದ ವ್ಯಕ್ತಿಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಮೊಹಮ್ಮದ್ ಸುಜ್ಜ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು
ವಿಮಾನ ನಿಲ್ದಾಣ ಠಾಣೆ ಪೊಲೀಸ್ ಮೂಲಗಳು ಹೇಳಿವೆ.


