ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಆದ ಬಳಿಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನನಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸಂಚಲನ ಸೃಷ್ಟಿಸುವ ಭರವಸೆ ಮೂಡಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.
ದೇವೇಗೌಡರ ಜತೆಗೂ ಪ್ರಧಾನಿಯವರು ಆತ್ಮೀಯವಾಗಿ ಮಾತಾಡಿದ್ದಾರೆ. ಈ ಸಲ ಲೋಕಸಭೆ ಚುನಾವಣೆಯಲ್ಲಿ ನಾವು ಎಲ್ಲಾ ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದರು. ಸೀಟು ಹಂಚಿಕೆಯಲ್ಲಿ ಒಂದು ಸೀಟ್ ಹೆಚ್ಚು ಕಡಿಮೆ ಆದರೂ ನಡೆಯುತ್ತದೆ ಎಂದಿದ್ದಾರೆ.
ನಾನು ಪಕ್ಷದ ಸಿಪಾಯಿ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ತಿನಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೋರಾಟ ಮಾಡೋದೇ ನಮ್ಮಗುರಿ. ಅದನ್ನ ಹೈಕಮಾಂಡ್ ಬಳಿ ಚರ್ಚೆ ಮಾಡ್ತೀನಿ. 28ಕ್ಕೆ 28 ಕ್ಷೇತ್ರ ಗೆಲ್ಲೋದೆ ನಮ್ಮಗುರಿ. ಅದರ ಬಗ್ಗೆ ನಾವು ನಿರ್ಧಾರ ಮಾಡ್ತಿದ್ದೇವೆ. ಕೇಂದ್ರದಲ್ಲಿ ಹೈಕಮಾಂಡ್ ಕೂಡ ಯಾರನ್ನ ಅಭ್ಯರ್ಥಿ ಮಾಡಬೇಕು ಅಂತ ಚರ್ಚೆ ನಡೆಸುತ್ತಿದೆ. ಯಾರನ್ನ ಅಭ್ಯರ್ಥಿ ಮಾಡಿದ್ರೆ ಗೆಲ್ಲಬಹುದು ಅನ್ನೋದನ್ನ ಲೆಕ್ಕ ಹಾಕಲಾಗ್ತಿದೆ ಎಂದಿದ್ದಾರೆ.


