ದೆಹಲಿಯಲ್ಲಿ ದಟ್ಟ ಮಂಜಿನಿಂದಾಗಿ ವಿಮಾನ ಸೇವೆಗೆ ತೊಂದರೆಯಾಗಿದೆ. ದೆಹಲಿ ವಿಮಾನ ನಿಲ್ದಾಣದಿಂದ ಹೊರಡುವ ಮತ್ತು ಹಿಂದಿರುಗುವ 30 ವಿಮಾನಗಳ ಮೇಲೆ ಮಂಜು ಪರಿಣಾಮ ಬೀರಿದೆ.
ಅಂತರಾಷ್ಟ್ರೀಯ ವಿಮಾನಗಳು ಸೇರಿದಂತೆ 30 ವಿಮಾನಗಳ ಸೇವೆ ವಿಳಂಬವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಸೇವೆ ವಿಳಂಬದ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಪ್ರಯಾಣಿಕರಿಗೆ ಸೂಚನೆ ನೀಡಲಾಗಿದೆ.
ಕಡಿಮೆ ಗಾಳಿಯ ಉಷ್ಣತೆಯಿಂದಾಗಿ, ಮಂಜು ವಾಹನ ಸಂಚಾರದ ಮೇಲೆ ಪರಿಣಾಮ ಬೀರಿದೆ. ಹಿಂದಿನ ದಿನ ಮಂಜು ಕವಿದಿದ್ದರಿಂದ ಅಕ್ಕಪಕ್ಕದ ನೋಟವೂ ಮರೆಯಾಗಿ ವಾಹನಗಳು ಒಂದರ ಹಿಂದೊಂದರಂತೆ ಡಿಕ್ಕಿ ಹೊಡೆಯುವ ಪರಿಸ್ಥಿತಿ ಇತ್ತು.
ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ಸರಾಸರಿ 400 ತಲುಪಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ನಿರೀಕ್ಷೆ ಇದೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ 50 ಮೀಟರ್‌ಗಿಂತ ಕಡಿಮೆ ಗೋಚರತೆ ಇದೆ.


