ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ವೈದ್ಯರಿಗಿಲ್ಲದ ವಸತಿಗೃಹದ ಬಗ್ಗೆ ನಮ್ಮತುಮಕೂರು ವಾಹಿನಿ ವರದಿಗೆ ಕೆಲವೇ ಗಂಟೆಗಳಲ್ಲಿ ಅಧಿಕಾರಿ ವರ್ಗ ಸ್ಪಂದಿಸಿದೆ.
ಭೂತ ಬಂಗಲೆಯಂತಿದ್ದ ವಸತಿಗೃಹವು ಅನೈತಿಕ ಚಟುವಟಿಕೆಗಳ ತಾಣವಾಗಿತ್ತು. ಇಲ್ಲಿ ನಿಲ್ಲಲು ವೈದ್ಯರು ಹಿಂದೇಟು ಹಾಕುತ್ತಿದ್ದರು. ಪಾಳು ಬಿದ್ದ ಸ್ಥಿತಿಯಲ್ಲಿ ಇರುವ ವಸತಿಗೃಹದ ಬಗ್ಗೆ ನಮ್ಮ ತುಮಕೂರು ವರದಿ ಮಾಡಿದ ಬೆನ್ನಲ್ಲೇ ಗೃಹ ಸಚಿವರ ಆದೇಶದಂತೆ ನೂತನ ವಸತಿ ಗೃಹಗಳ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ.
ಆದೇಶ ಪ್ರತಿಯಲ್ಲಿ ಹಳೆಯ ವಸತಿ ಗೃಹಗಳನ್ನು ನೆಲಸಮಗೊಳಿಸುವಂತೆ ಆದೇಶಿಸಲಾಗಿದೆ. ನೂತನ ವಸತಿ ಗೃಹಗಳ ನಿರ್ಮಾಣಕ್ಕೆ ಅಡಿಪಾಯ ಹಾಕುವಂತೆ ಆದೇಶಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಲಕ್ಷ್ಮಿಕಾಂತ್ ಸ್ಪಷ್ಟನೆ ನೀಡಿದ್ದಾರೆ.
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ಇದನ್ನೂ ಓದಿ:
ಕೊರಟಗೆರೆ: ವೈದ್ಯರು ಇರಬೇಕಾದ ಕೊಠಡಿಗಳು ಭೂತ ಬಂಗಲೆಯಂತಿವೆ!


