ಕೊರಟಗೆರೆ: ತಾಲೂಕಿನ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಬಿ.ಎಸ್. ಆರ್. ಕಂಪನಿಯ ಸಮೀಪವಿರುವ ರಸ್ತೆಯ ಪಕ್ಕದಲ್ಲಿ ಕೊಳೆತ ಸ್ಥಿತಿಯಲ್ಲಿ ಅನಾಥ ಮೃತದೇಹವೊಂದು ಪತ್ತೆಯಾಗಿದೆ.
ಸುಮಾರು ನಾಲ್ಕು ದಿನಗಳ ವ್ಯಕ್ತಿ ಮೃತಪಟ್ಟಿರಬಹುದು ಎಂದು ಸ್ಥಳೀಯರ ಸಂಶಯ ವ್ಯಕ್ತಪಡಿಸಿದ್ದಾರೆ. ನಾಲ್ಕೈದು ದಿನಗಳ ಹಿಂದೆ ಈ ವ್ಯಕ್ತಿ ಗ್ರಾಮದ ದೇವಸ್ಥಾನದ ಬಳಿ ಭಿಕ್ಷೆ ಬೇಡುತ್ತಿದ್ದ ಎಂದು ಸ್ಥಳೀಯರು ಹೇಳಿದ್ದಾರೆ.
ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣಾಧಿಕಾರಿ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್, ಕೋಳಾಲ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ರೇಣುಕಾ ಯಾದವ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ