ಪಾಕಿಸ್ತಾನದಲ್ಲಿ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಡಾ.ಸವೀರಾ ಪ್ರಕಾಶ್ ಎಂಬ ಯುವತಿ ಇತಿಹಾಸ ನಿರ್ಮಿಸಲಿದ್ದಾರೆ.
ಪಾಕಿಸ್ತಾನ್ ಪೀಪಲ್ಸ್ ಪಕ್ಷದ ಅಭ್ಯರ್ಥಿಯಾಗಿ ಜವೀರಾ ಪ್ರಕಾಶ್ ಸ್ಪರ್ಧಿಸಿದ್ದಾರೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬುನರ್ ಜಿಲ್ಲೆಯಲ್ಲಿ ಡಾ. ಜವೀರಾ ಪ್ರಕಾಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಫೆಬ್ರವರಿ 8, 2024 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. 2022ರಲ್ಲಿ ವೈದ್ಯಕೀಯ ಪದವಿ ಪೂರ್ಣಗೊಳಿಸಿರುವ ಸವೀರಾ, ಬುನೇರ್ ನಲ್ಲಿರುವ ಪಿಪಿಪಿ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಜವೀರಾ ಅಬೋಟಾಬಾದ್ ಇಂಟರ್ನ್ಯಾಷನಲ್ ಮೆಡಿಕಲ್ ಕಾಲೇಜಿನಲ್ಲಿ ಪದವಿ ಪಡೆದರು. ಇತ್ತೀಚೆಗೆ, ಪಾಕಿಸ್ತಾನದ ಚುನಾವಣಾ ಆಯೋಗವು ಸಾಮಾನ್ಯ ಸ್ಥಾನಗಳಲ್ಲಿ ಮಹಿಳೆಯರಿಗೆ 5 ಪ್ರತಿಶತ ಪ್ರಾತಿನಿಧ್ಯವನ್ನು ಕಡ್ಡಾಯಗೊಳಿಸಿದೆ.


