ತಮಿಳುನಾಡಿನ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಚೆನ್ನೈನ ತೊಂಡಿಯಾರ್ ಪೇಟ್ ನಲ್ಲಿರುವ ಪ್ಲಾಂಟ್ ನಲ್ಲಿ ಸ್ಫೋಟ ಸಂಭವಿಸಿದೆ.
ಘಟನೆಯಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಐಒಸಿಎಲ್ ಘಟಕದ ಒಳಗಿನ ಕೆಸರಿನ ತೊಟ್ಟಿಯನ್ನು ಸ್ವಚ್ಛಗೊಳಿಸುವ ವೇಳೆ ಈ ಅವಘಡ ಸಂಭವಿಸಿದೆ.
ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತರುತ್ತಿದ್ದಾರೆ. ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದಿವೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.


