ಎಂಫಿಲ್ (ಮಾಸ್ಟರ್ ಆಫ್ ಫಿಲಾಸಫಿ) ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ (ಯುಜಿಸಿ) ಯಿಂದ ಗುರುತಿಸಲ್ಪಡದ ಪದವಿಯಾಗಿದ್ದು, ಎಂಫಿಲ್ ಕೋರ್ಸ್‌ಗಳ ಪ್ರವೇಶವನ್ನು ನಿಲ್ಲಿಸುವಂತೆ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಲಾಗಿದೆ.
ಕೆಲವು ವಿಶ್ವವಿದ್ಯಾನಿಲಯಗಳು ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿರುವುದು ಗಮನಕ್ಕೆ ಬಂದ ನಂತರ ಸ್ಪಷ್ಟನೆ ನೀಡಲಾಗಿದೆ ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಹೇಳಿದ್ದಾರೆ.
2023-24ರ ಶೈಕ್ಷಣಿಕ ವರ್ಷಕ್ಕೆ ಎಂಫಿಲ್‌ಗೆ ಪ್ರವೇಶವನ್ನು ನಿಲ್ಲಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಯೋಗವು ವಿಶ್ವವಿದ್ಯಾಲಯಗಳನ್ನು ಕೇಳಿದೆ. ಎಂಫಿಲ್ ಯುಜಿಸಿ ನಿಯಮಗಳ ಅಡಿಯಲ್ಲಿ ಮಾನ್ಯತೆ ಪಡೆದ ಪದವಿಯಲ್ಲ. ಯಾವುದೇ ಉನ್ನತ ಶಿಕ್ಷಣ ಸಂಸ್ಥೆಗಳು ಎಂಫಿಲ್ ಕೋರ್ಸ್ ನೀಡಬಾರದು. ಎಂಫಿಲ್ ಕೋರ್ಸ್‌ಗೆ ಪ್ರವೇಶ ಪಡೆಯದಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ ಎಂದು ಜೋಶಿ ಹೇಳಿದರು.


