nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ತಾಲೂಕಿನಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಒಟ್ಟು 61 ಪ್ರತ್ಯೇಕ ಸ್ಮಶಾನ ಮೀಸಲಿವೆ : ತಹಶೀಲ್ದಾರ್ ಕೆ. ಮಂಜುನಾಥ್
    ಕೊರಟಗೆರೆ December 28, 2023

    ಕೊರಟಗೆರೆ ತಾಲೂಕಿನಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಒಟ್ಟು 61 ಪ್ರತ್ಯೇಕ ಸ್ಮಶಾನ ಮೀಸಲಿವೆ : ತಹಶೀಲ್ದಾರ್ ಕೆ. ಮಂಜುನಾಥ್

    By adminDecember 28, 2023No Comments2 Mins Read
    koratagere

    ವರದಿ: ಮಂಜುಸ್ವಾಮಿ ಎಂ ಎನ್ ಕೊರಟಗೆರೆ

    ಕೊರಟಗೆರೆ: ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಂದು ಕೊರತೆಯ ಸಭೆಯು ತಹಶೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಿತು.


    Provided by
    Provided by

    ಸಭೆಯನ್ನು ಉದ್ದೇಶಿಸಿ ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಪ.ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಪ್ರತ್ಯೇಕ ಆದಾಯವನ್ನು ಮೀಸಲು ಇಡಲಾಗಿದೆ, ಎಂದು ಪ.ಪಂ ಮುಖ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂದಿನ ಸಭೆಯಲ್ಲಿ ಸಂಪೂರ್ಣ ವರದಿಯನ್ನು ನೀಡುವಂತೆ ಪ.ಪಂ ಮುಖ್ಯಾಧಿಕಾರಿಗೆ ತಿಳಿಸಿದರು.

    ಶುದ್ಧ ಕುಡಿಯುವ ನೀರಿನ ಘಟಕ, ರಸ್ತೆ, ಹೈಮಾಸ್ಕ್ ದೀಪದ ಸಂಪೂರ್ಣ ಮಾಹಿತಿಯನ್ನು ಕಡ್ಡಾಯವಾಗಿ ಶನಿವಾರ ನೀಡುವಂತೆ ಕೆಆರ್‍ಡಿಎಲ್ ಇಲಾಖೆಗೆ ಸೂಚಿಸಿದ್ದೇನೆ, ಕಂದಾಯ ಇಲಾಖೆಯ ಅಧಿಕಾರಿಗಳು, ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾ.ಪಂ ಅಧಿಕಾರಿಗಳು ಡಿ.21ರಂದು ದಾಸರಹಳ್ಳಿ ಗ್ರಾಮದ ಸ್ಮಶಾನ ಭೂಮಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳದ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ ವೇಳೆ ಸ್ಮಶಾನ ಜಾಗ ಒತ್ತುವಾರಿಯಾಗಿರುವುದು ಕಂಡು ಬಂದಿದೆ ಜ.1ರಂದು ಒತ್ತುವರಿಯಾದ ಸ್ಮಶಾನ ಜಾಗವನ್ನು ತೆರವು ಕಾರ್ಯಾಚರಣೆ ಮಾಡಲಾಗುವುದು ಜೊತೆಗೆ ಎಂದು ಹೇಳಿದರು.

    ಹೊಳವನಹಳ್ಳಿ ಹೋಬಳಿ ಬಿ.ಡಿ ಪುರ ಗ್ರಾಮದಲ್ಲಿ ಸ.ನಂ.73ರಲ್ಲಿ 1 ಎಕರೆ ಸಾರ್ವಜನಿಕ ರುದ್ರಭೂಮಿ ಇದೆ, ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಪ್ರತ್ಯೇಕ ಸ್ಮಶಾನ ಮಂಜೂರು ಮಾಡಲು ಅವಕಾಶವಿಲ್ಲ, ಇದರಲ್ಲಿ 13 ಗುಂಟೆ ಒತ್ತುವರಿಯಾಗಿದೆ ಜ.6ರಂದು ತೆರವು ಕಾರ್ಯಾಚರಣೆ ಮಾಡಲಾಗುವುದು ಎಂದರು.
    ತಾಲೂಕಿನಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಒಟ್ಟು ಈಗಾಗಲೇ 61 ಪ್ರತ್ಯೇಕ ಸ್ಮಶಾನ ಮೀಸಲು ಇರಿಸಿದ ಸ್ಮಶಾನಗಳಿವೆ, ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿಯ ಗ್ರಾಮೀಣಾ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ತೆಗೆದುಕೊಳ್ಳಬಹುದು, ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿಯ ಇದರ ಹಣ ಸ್ಮಶಾನದ ಅಭಿವೃದ್ಧಿಗೆ ಬಳಸದೆ ಇತರೆ ಸಾಮಾನ್ಯದ ಹಣವನ್ನು ಬಳಸುವಂತೆ ಪ.ಪಂ ಅಧಿಕಾರಿಗಳಿಗೆ ತಿಳಿಸಲಾಗಿದೆ.

    ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ರೀತಿಯ ಜನಾಂಗದವರು ರಸ್ತೆಯ ಅಂಗಡಿ ಮಳಿಗೆಗಳಲ್ಲಿ ಮತ್ತು ಮನೆಗಳಲ್ಲಿ ಅಕ್ರಮವಾಗಿ ಮಧ್ಯಪಾನವನ್ನು ಮಾರಾಟ ಮಾಡುತ್ತಾರೆ, ಆದರೆ ಅಬಕಾರಿ ಇಲಾಖೆಯವರು ಪರಿಶಿಷ್ಟ ಜಾತಿಯವರನ್ನೇ ಟಾರ್ಗೇಟ್ ಮಾಡಿ ದಂಡ ಹಾಕುತ್ತಿದ್ದಾರೆ ಎಂದು ದಲಿತ ಮುಖಂಡರು ಆರೋಪ ಮಾಡಿದ್ದಾರೆ, ಅಬಕಾರಿ ಇಲಾಖೆಯ ವಿರುದ್ಧ ಸಭೆಯಲ್ಲಿ ಹೆಚ್ಚಿನ ಆರೋಪಗಳು ಕೇಳಿ ಬಂದಿವೆ, ಪ್ರತಿ ತಿಂಗಳು ಅಕ್ರಮ ಮಧ್ಯಪಾನದ ದಂಡ ವಸೂಲಿಯ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ ಎಂದರು.

    ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಡಿ.26ರಂದು ಯುವನಿಧಿಗೆ ಚಾಲನೆ ನೀಡಿದ್ದಾರೆ, 2022-23ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಪದವಿಧರ, ಡಿಪ್ಲೋಮೊ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉದ್ಯೋಗ ಸೃಷ್ಟಿಸಿಕೊಳ್ಳುವವರೆಗೆ ಸಹಾಯ ಧನ ಬರಲಿದೆ ಅರ್ಹ ಫಲಾನುಭವಿಗಳು ಇಂದೇ ಅರ್ಜಿ ಹಾಕಿ ಸೌಲಭ್ಯವನ್ನು ಪಡೆದುಕೊಳ್ಳಿ ಎಂದರು.
    ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಸರ್ಕಾರವು ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಪ್ರತ್ಯೇಕ ಸ್ಮಶಾನ ಮಂಜೂರು ಮಾಡಬೇಕು. ಏಕೆಂದರೆ, ದಲಿತ ಜನಾಂಗದವರನ್ನು ಸಮಾಜವು ಇಂದಿಗೂ ಅಸ್ಪøಶರಂತೆ ಕಾಣುತ್ತಿದೆ. ಈಗಲು ಸಹ ಅನೇಕ ದೇವಾಲಯಗಳಲ್ಲಿ ನಮ್ಮ ಜನಾಂಗ ದವರಿಗೆ ಪ್ರವೇಶವಿಲ್ಲ, ಆದ್ದರಿಂದ ಜಾತಿ ಪದ್ಧತಿ ಹೋಗುವವರೆಗೆ ದಲಿತರಿಗೆ ಪ್ರತ್ಯೇಕ ಸ್ಮಶಾನ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

     

    ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ:

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ಸಮುದಾಯದ ಮಕ್ಕಳು ಯುಪಿಎಸ್ಸಿ, ಕೆಎಎಸ್, ಐಎಎಸ್ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ತೆಗೆದುಕೊಳ್ಳುವಂತಿದ್ದರೆ ಸರ್ಕಾರವೇ ಅದರ ವೆಚ್ಚವನ್ನು ಭರಿಸಿ 10 ತಿಂಗಳವರೆಗೆ ಉಚಿತವಾಗಿ ತರಬೇತಿ ನೀಡುತ್ತಿದೆ, ಎಸ್ಸಿ/ಎಸ್ಟಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ, ಓಬಿಸಿ ಜನಾಂಗಕ್ಕೆ ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿ ಇರಬೇಕು, ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್‍ನಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದಾರೆ ಇಂತಹ ಸೌಲಭ್ಯಗಳು ಸಿಕ್ಕಲ್ಲಿ ಯುವ ಜನತೆ ಕೂಡಲೇ ಬಳಸಿಕೊಳ್ಳಬೇಕು ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.

    ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ನರಸಿಂಹಮೂರ್ತಿ, ತಾ.ಪಂ ಇಓ ಅಪೂರ್ವ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಯಮುನಾ, ಪಿಎಸ್‍ಐ ಚೇತನ್‍ಕುಮಾರ್, ಪರಿಶಿಷ್ಟ ಜಾತಿಯ ಚಿಕ್ಕರಂಗಯ್ಯ, ಸಿದ್ದಪ್ಪ, ದೊಡ್ಡಯ್ಯ, ಮಂಜುನಾಥ್, ಸುರೇಶ್, ಶಿವರಾಂ, ಗಿರಿನಗರ ನಾಗರಾಜು, ವಿನಯ್, ನಂದೀಶ್, ನವೀನ್, ನಾಗೇಶ, ಪರಿಶಿಷ್ಟ ವರ್ಗದ ಓಬಳರಾಜು, ಮಂಜುನಾಥ್, ವಿನಯ್, ಮಹೇಶ್ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಬೆಂಗಳೂರು: ಹಿರಿಯ ಕೆಎಎಸ್ (KAS) ಅಧಿಕಾರಿಯೊಬ್ಬರ ವಿರುದ್ಧ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅಪಪ್ರಚಾರ ಮಾಡಿದ ಆರೋಪದ…

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.