ಅಯೋಧ್ಯೆಯ ರಾಮಮಂದಿರದ 84 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಉತ್ತರ ಪ್ರದೇಶ ಸರ್ಕಾರ ನಿಷೇಧಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಕಾರ, ದೇವಸ್ಥಾನದ 84 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನವೇ ಈ ಕ್ರಮ.
ಕಳೆದ ವರ್ಷ ಜೂನ್ ನಲ್ಲಿ, ಯುಪಿ ಸರ್ಕಾರವು ಅಯೋಧ್ಯೆ ಮತ್ತು ಮಥುರಾದಲ್ಲಿನ ದೇವಾಲಯಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮದ್ಯಮುಕ್ತ ವಲಯಗಳನ್ನು ಘೋಷಿಸಿತ್ತು. ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ ಅಥವಾ ಬೇರೆಡೆಗೆ ಸ್ಥಳಾಂತರಿಸಲಾಗಿದೆ.
2018 ರಿಂದ, ಅಯೋಧ್ಯೆ ನಗರದಲ್ಲಿ ಮದ್ಯ ಮತ್ತು ಮಾಂಸವನ್ನು ನಿಷೇಧಿಸಲು ಬೇಡಿಕೆಯಿದೆ. ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡಿದ ನಂತರ ಬೇಡಿಕೆ ಬಲವಾಯಿತು.


