ಹುಬ್ಬಳ್ಳಿ: ಮತ್ತು ಬರುವ ಔಷಧಿ ನೀಡಿ ಯುವತಿಗೆ ಅತ್ಯಾಚಾರವೆಸಗಿದ ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಗುಲಾಮ್ ಜಿಲಾನಿ ಅಜಹರಿ ಸೇರಿದಂತೆ 8 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಹುಬ್ಬಳ್ಳಿ ಮೂಲದ 23 ವರ್ಷದ ಯುವತಿ, ಮಧ್ಯಪ್ರದೇಶದ ಖಂಡವಾದಲ್ಲಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿಯ ಮದರಸಾದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಯ ಪರಿಚಯಸ್ಥನಾಗಿದ್ದನು. ಹೀಗಾಗಿ ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಗೆ “ನಿಮ್ಮ ಮಗಳಿಗೆ ನಮ್ಮಲ್ಲಿ ಕೆಲಸ ಇದೆ” ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಯುವತಿ ಖಂಡವಾ ಪಟ್ಟಣಕ್ಕೆ ಹೋಗಿದ್ದಳು.
ಅಲ್ಲಿ ಯುವತಿಯನ್ನು ಪುಸಲಾಯಿಸಿದ ಮುಫ್ತಿ ಗುಲಾಮ ಜಿಲಾನಿ ಅಜಹರಿ, ತನ್ನ ಮೊದಲ ಹೆಂಡತಿಗೆ ವಿಚ್ಛೇದನ ನೀಡಿದ್ದಾನೆ. ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ಹೇಳುತ್ತಲೇ ಯುವತಿಗೆ ಮತ್ತು ಬರುವ ಔಷಧ ಕೊಟ್ಟು ನಿರಂತರವಾಗಿ ಅತ್ಯಾಚಾರವೆಸಗಿದ್ದು, ಆರೋಪಿಯ ಬಂಧನ ಮಾಡಲಾಗಿದೆ.


