nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯರ ಸೇವೆಯ ಮೂಲಕ ದೇವರ ಸೇವೆ ಮಾಡೋಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    ರಾಜ್ಯ ಸುದ್ದಿ December 30, 2023

    ಹಿರಿಯರ ಸೇವೆಯ ಮೂಲಕ ದೇವರ ಸೇವೆ ಮಾಡೋಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    By adminDecember 30, 2023No Comments1 Min Read
    belagavi 2

    ಬೆಳಗಾವಿ: ಹಿರಿಯ ನಾಗರಿಕರೇ ನಮಗೆ ಕಣ್ಣಿಗೆ ಕಾಣುವ ದೇವರು. ಅವರ ಸೇವೆ ಮಾಡುವ ಮೂಲಕ ದೇವರ ಸೇವೆ ಮಾಡೋಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

    ಇಲ್ಲಿಯ ಕಿಣಿಯೆಯಲ್ಲಿರುವ ಶಾಂತಾಯಿ ವೃದ್ದಾಶ್ರಮದಲ್ಲಿ ಗುರುವಾರ ಪ್ರಾರ್ಥನಾ ಮಂದಿರ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ದುರ್ಬಲರೆಂದು ಗುರುತಿಸಲ್ಪಟ್ಟಿರುವ ಹಿರಿಯ ನಾಗರಿಕರು, ವಿಕಲಚೇತನರು, ಮಹಿಳೆಯರು ಮತ್ತು ಮಕ್ಕಳ ಸೇವೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಈ ಅವಕಾಶವನ್ನು ಬಳಸಿಕೊಂಡು ನನ್ನ ಅವಧಿಯಲ್ಲಿ ಏನನ್ನಾದರೂ ಸಾಧಿಸಬೇಕೆನ್ನುವ ಕನಸು ಹೊತ್ತಿದ್ದೇನೆ. ನಮ್ಮನ್ನು ದುರ್ಬಲರ ಸೇವೆಯಲ್ಲಿ ತೊಡಗಿಸಿಕೊಂಡಾಗ ಅದರಿಂದ ಸಿಗುವ ಆತ್ಮತೃಪ್ತಿ ಬೇರೆಲ್ಲೂ ಸಿಗಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.


    Provided by
    Provided by

    ಆಶ್ರಮದ ರಸ್ತೆ ಅಭಿವೃದ್ಧಿ ಭರವಸೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್, ಸರಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದರು. ಕಳೆದ 25 ವರ್ಷದಿಂದ ಶಾಂತಾಯಿ ವೃದ್ದಾಶ್ರಮ ನಿರಂತರ ಸೇವೆಯಲ್ಲಿ ತೊಡಗಿಕೊಂಡಿದೆ. ವಿಜಯ ಮೋರೆ ಮತ್ತು ಇಲ್ಲಿನ ಎಲ್ಲ ಪದಾಧಿಕಾರಿಗಳಿಗೆ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅವರೆಲ್ಲರ ಕುಟುಂಬಕ್ಕೆ ದೇವರ ಆಶಿರ್ವಾದ ಖಂಡಿತ ಇರುತ್ತದೆ ಎಂದು ಹೆಬ್ಬಾಳಕರ್ ಹೇಳಿದರು.

    ಇದೇ ವೇಳೆ ವೃದ್ದಾಶ್ರಮದ ಮಹಿಳೆಯರು ಸಚಿವರನ್ನು ಸತ್ಕರಿಸಿದರು. ವೃದ್ದಾಶ್ರಮದ ಅಧ್ಯಕ್ಷ ವಿಜಯ ಪಾಟೀಲ, ಕಾರ್ಯಾಧ್ಯಕ್ಷ ವಿಜಯ ಮೋರೆ, ಜಯಂತ ಹುಂಬರವಾಡಿ, ಸಮೀರ ಕಣಬರ್ಗಿ, ಕೀತ್ ಮಚಾಡೊ, ದಿಲೀಪ್ ಚಿಟ್ನಿಸ್, ಸಿದ್ಧಾರೂಢ ಹುಂದ್ರೆ, ಆನಂದ ದೇಸಾಯಿ, ಪ್ರವೀಣ್ ದೊಡ್ಡಣ್ಣನವರ್, ವಿಶ್ವನಾಥ್ ಕೆ. ಸಾಮಂತ್, ರಾಜೇಂದ್ರ ಹರಕುಣಿ, ನಿಲೇಶ್ ಕೋಚಾ, ಬಸವನಗೌಡ ಪಾಟೀಲ, ಯುವರಾಜ್ ಕದಂ, ಬಾಮನವಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಂಕುಂತಲಾ ಎಸ್. ಹಣಬರ, ಪ್ರಿಯಾಂಕಾ ಪಿ. ಪಾಟೀಲ್, ವರ್ಷಾ ದುಕಾರೆ ಮೊದಲಾದವರು ಇದ್ದರು.

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದ ಹಾದಿಯಲ್ಲೇ ಈಗ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರು ಕೂಡ…

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.