ಬೆಂಗಳೂರು: ಒಂದು ವರ್ಷದಲ್ಲಿ ನೂರು ಕೋಟಿ ರೂ. ಗೂ ಅಧಿಕ ಮೌಲ್ಯದ ಡ್ರಗ್ಸ್ ನ್ನು ಬೆಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2023ರಲ್ಲಿ ಒಟ್ಟು ಇದುವರೆಗೆ ನೂರು ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಕೊನೆಯ ನಾಲ್ಕು ತಿಂಗಳುಗಳಲ್ಲಿಯೇ ಭರ್ಜರಿ ಬೇಟೆಯಾಡಿದ ಪೊಲೀಸರು ಬರೋಬ್ಬರಿ 60 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಇಲ್ಲಿಯವರೆಗೆ ಮೂರು ಸಾವಿರ ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.


