ಛತ್ತೀಸ್ ಗಢದಲ್ಲಿ ನಕ್ಸಲೀಯರ ದಾಳಿ. ಗುಂಡಿನ ದಾಳಿಯಲ್ಲಿ 6 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ. ಮಗುವಿನ ತಾಯಿ ಮತ್ತು ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಸೋಮವಾರ ಬಿಜಾಪುರದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರು ಘರ್ಷಣೆ ನಡೆಸಿದರು.
ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ವಂಡಿ ಗ್ರಾಮದ ಬಳಿಯ ಅರಣ್ಯದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಎನ್‌ಕೌಂಟರ್ ನಡೆದಿದೆ. ಡಿಆರ್ ಜಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದರು ಎಂದು ವರದಿಯಾಗಿದೆ.
ಭದ್ರತಾ ಪಡೆಗಳೂ ಪ್ರತಿದಾಳಿ ನಡೆಸಿದಾಗ ಎನ್ ಕೌಂಟರ್ ಆರಂಭವಾಯಿತು. ಗಾಯಗೊಂಡ ಮಹಿಳೆ ಹಾಗೂ ಇಬ್ಬರು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಆರ್ ಜಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಅಧಿಕಾರಿಗಳು ಎನ್ ಕೌಂಟರ್ ನಡೆದ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾರೆ.


