ಬಿಹಾರದಲ್ಲಿ ದಲಿತ ಮಹಿಳೆಗೆ ಪೊಲೀಸ್ ಅಧಿಕಾರಿಯಿಂದ ಸಾರ್ವಜನಿಕವಾಗಿ ಥಳಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಅಧಿಕಾರಿ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.
ಬಿಹಾರದ ಸೀತಾಮರ್ಹಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ರಾಜ್ ಕಿಶೋರ್ ಸಿಂಗ್ ಎಂಬ ಪೊಲೀಸ್ ಅಧಿಕಾರಿ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯನ್ನು ಲಾಠಿಯಿಂದ ಥಳಿಸುತ್ತಿರುವುದನ್ನು ಕಾಣಬಹುದು. ಇದು ದೊಡ್ಡ ವಿವಾದವಾಯಿತು.
ಇದೇ ವೇಳೆ ರಸ್ತೆಯಲ್ಲಿ ಮಹಿಳೆಯರಿಬ್ಬರ ನಡುವೆ ವಾಗ್ವಾದ, ಗಲಾಟೆ ನಡೆದಿದ್ದು, ಕರೆದುಕೊಂಡು ಹೋಗುವಾಗ ಥಳಿಸಿದ್ದಾರೆ ಎಂದು ಪೊಲೀಸರು ವಿವರಣೆ ನೀಡಿದರು. ಅಧಿಕಾರಿ ತಪ್ಪಿತಸ್ಥರೆಂದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸೀತಾಮರ್ಹಿ ಎಸ್ಪಿ ಮನೋಜ್ ಕುಮಾರ್ ತಿವಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಪೊಲೀಸರ ವಿರುದ್ಧ ಬಿಜೆಪಿ ಟೀಕೆಗೆ ಮುಂದಾಯಿತು. ಬಿಹಾರದಲ್ಲಿ ಕ್ರಿಮಿನಲ್ ಗಳು ಸ್ವಚ್ಛಂದವಾಗಿ ಓಡಾಡುತ್ತಿದ್ದರೆ, ಪೊಲೀಸರು ಜನರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಆರೋಪಿಸಿದ್ದಾರೆ.


