nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ತವರು ಕ್ಷೇತ್ರದಲ್ಲಿ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ರಾಕ್ಷಸೀ ಕೃತ್ಯ
    Uncategorized January 3, 2024

    ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ತವರು ಕ್ಷೇತ್ರದಲ್ಲಿ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ರಾಕ್ಷಸೀ ಕೃತ್ಯ

    By adminJanuary 3, 2024No Comments1 Min Read
    belagavi

    ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಬೆಳಗಾವಿ ಜಿಲ್ಲೆಯಲ್ಲೇ ಮೇಲಿಂದ ಮೇಲೆ ಮಹಿಳೆ ಮೇಲೆ ದೌರ್ಜನ್ಯ ನಡೆಯುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿದೆ. ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡೆಸಿದ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ‌ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿ, ಹಲ್ಲೆ ನಡೆಸಿ ರಾಕ್ಷಸ ವರ್ತನೆ ತೋರಲಾಗಿದೆ.

    ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಸುಗಂಧಾ ಮೋರೆ(50) ಎಂಬ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ನಡೆದಿದೆ. ಸುಂಗಧಾ ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದು ಸಾವು ಬದುಕಿನ ಮಧ್ಯೆ ನರಳಾಡುತ್ತಿದ್ದಾರೆ. ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿ ಬೆಳೆಯಲಾಗಿದ್ದ ಹೂ ಕಿತ್ತರೂ ಎಂಬ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ, ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮನೆ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಅಂಗನವಾಡಿ ಸಹಾಯಕಿಯ ಮೂಗನ್ನೇ ಕಟ್ ಮಾಡಿ ಅಟ್ಟಹಾಸ ಮೆರೆದಿದ್ದಾನೆ.

    ಮೂಗು ಕತ್ತರಿಸಿರುವ ಹಿನ್ನೆಲೆ ಶ್ವಾಸಕೋಶದಲ್ಲಿ ರಕ್ತ ಹೋಗಿ ಮಹಿಳೆ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಅಂಗನವಾಡಿ ಮಕ್ಕಳು ಆಟವಾಡುತ್ತ ಅಂಗನವಾಡಿ ಪಕ್ಕದಲ್ಲೇ ಇರುವ ಮನೆಯ ಆವರಣದಲ್ಲಿ ಬೆಳೆಯಲಾಗಿದ್ದ ಮಲ್ಲಿಗೆ ಹೂ ಕಿತ್ತಿದ್ದರು. ಇದರಿಂದ ಕೋಪಗೊಂಡು ಅಂಗನವಾಡಿ ಸಹಾಯಕಿಗೆ ಮನೆ ಮಾಲೀಕ ಶಿಕ್ಷೆ ಕೊಟ್ಟಿದ್ದಾನೆ. ಮಕ್ಕಳು ಮಾಡಿದ ತಪ್ಪಿಗೆ ಸಹಾಯಕಿಗೆ ಮಹಿಳೆ ಅನ್ನೋದನ್ನೂ ಮರೆತು ಹಲ್ಲೆ ಮಾಡಲಾಗಿದೆ. ಜ.1ರಂದು ಅಂಗನವಾಡಿ ಕೇಂದ್ರದ ಮುಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯಲ್ಲಿ ದಿನೇ ದಿನೇ ರಾಕ್ಷಸಿ ವರ್ತನೆಯ ಕೃತ್ಯಗಳು ಹೆಚ್ಚುತ್ತಿವೆ.

    ಇನ್ನು ಮೂಗ ಗಂಡನೊಂದಿಗೆ ಅಂಗನವಾಡಿ ಸಹಾಯಕಿಯಾಗಿ ಜೀವನ ಕಟ್ಟಿಕೊಳ್ತಿದ್ದ ಮಹಿಳೆ ಈಗ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸದ್ಯ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸುಗಂಧಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಈ ವರೆಗೂ ಅರೋಪಿ ಕಲ್ಯಾಣಿಯನ್ನು ಪೊಲೀಸರು ಬಂಧಿಸಿಲ್ಲ.

    admin
    • Website

    Related Posts

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಹಣ್ಣು ಎಂದಾಕ್ಷಣ ಇದೀಗ ವಿದೇಶಿ ಹಣ್ಣುಗಳದ್ದೇ ಹವಾ ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ ಮುಂದೊಂದು…

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.