ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಸಿರಿಧಾನ್ಯ ಹಬ್ಬದ ಹಿನ್ನೆಲೆ, ರಾಗಿಮುದ್ದೆ ತಿನ್ನುವ ಸ್ಪರ್ಧೆ ನಡೆಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಅರಕೆರೆಯ ಈರೇಗೌಡ ಅವರು ಬರೋಬ್ಬರಿ 2.7 ಕೆ.ಜಿ. ತೂಕದ ಮುದ್ದೆ ತಿನ್ನುವ ಮೂಲಕ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸ್ಪರ್ಧಿಗಳಿಗೆ ಮುದ್ದೆ ತಿನ್ನಲು 30 ನಿಮಿಷಗಳ ಕಾಲಾವಕಾಶ ನೀಡಲಾಗಿತ್ತು.
ಮುದ್ದೆ ಜೊತೆ ಬಿಸಿ ನಾಟಿ ಕೋಳಿ ಸಾರನ್ನು ಬಡಿಸಲಾಗಿತ್ತು. 62 ವರ್ಷ ಪ್ರಾಯದ ಈರೇಗೌಡ 10 ಮುದ್ದೆ ತಿಂದು ಅಗ್ರ ಸ್ಥಾನ ಪಡೆದುಕೊಂಡರು.


