ಅರೆಕಾಲಿಕ ಹುದ್ದೆಗಳಲ್ಲಿ ನೇಮಕಗೊಂಡಿರುವ ಬೋಧಕೇತರ ಸಿಬ್ಬಂದಿಗಳ ಹುದ್ದೆಗೆ ಸಂಬಂಧಿಸಿದಂತೆ ನಡೆದ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ, ಯಾವುದೇ ನಿರ್ಣಯಕ್ಕೆ ಬಂದಿಲ್ಲ.
ಕುಲಪತಿ ಪ್ರೊ.ಲೋಕನಾಥ್ ಅಧ್ಯಕ್ಷತೆಯಲ್ಲಿ ವಿಶೇಷ ಸಿಂಡಿಕೇಟ್ ಸಭೆ ಆಯೋಜಿಸಲಾಗಿತ್ತು. ವಿವಿಯಲ್ಲಿನ ಬೋಧಕೇತರ ಸಿಬ್ಬಂದಿಗಳ ಹುದ್ದೆ ನೇಮಕಾತಿ ಸಂಬಂಧ ತೀರ್ಮಾನ ಕೈಗೊಳ್ಳುವ ಸಲುವಾಗಿ ಈ ಸಭೆ ನಡೆಸಲಾಯಿತು. ಆದರೂ ಯಾವುದೇ ಅಂತಿಮ ತೀರ್ಮಾನಕ್ಕೆ ಸಭೆ ಬರಲಾಗಲಿಲ್ಲ.
ಬೋಧಕೇತರ ಸಿಬ್ಭಂದಿ ನೇಮಕ ಪ್ರಶ್ನಿಸಿ ಸರಕಾರ ಸೂಕ್ತ ಕ್ರಮಕ್ಕೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿತ್ತು. 400 ಕ್ಕೂ ಹೆಚ್ಚು ಬೋಧಕೇತರ ಸಿಬ್ಬಂದಿಗಳ ಅಳಿವು –ಉಳಿವಿನ ಪ್ರಶ್ನೆ ಇದಾಗಿತ್ತು.


