ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ. ಏನೇ ಸಮಸ್ಯೆ ಇದ್ದರೂ ನಮ್ಮ ಬಳಿ ಹೇಳಿ ಎಂದು ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಕೆ.ಆರ್.ಪುರಂನ ಐಟಿಐ ಕ್ರೀಡಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು ಬಳಿಕ ಮಾತನಾಡಿದ ಅವರು, ನೀವು ನಮ್ಮನ್ನು ಭೇಟಿ ಮಾಡಲು ಬಹಳ ಕಷ್ಟ ಆಗುತ್ತೆ. ಶಾಸಕರಿಗೆ ಬಹಳಷ್ಟು ಒತ್ತಡ ಇರುತ್ತೆ. ಹೀಗಾಗಿ ಎಲ್ಲಾ ಅಧಿಕಾರಿಗಳನ್ನು ಕರೆದುಕೊಂಡು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನಿಮ್ಮ ಸಮಸ್ಯೆ ಕೇಳಿಯೇ ಹೋಗುತ್ತೇನೆ. ನನಗೆ ರಾಜಕಾರಣ ಮುಖ್ಯ ಅಲ್ಲ. ನಿಮ್ಮ ಬದುಕಿನ ಮೇಲೆ ರಾಜಕಾರಣ ಮಾಡಲ್ಲ. ನಾನು ನಿಮ್ಮ ಕಷ್ಟ ಕೇಳಲು ಇಲ್ಲಿಗೆ ಬಂದಿದ್ದೇನೆ ಎಂದು ಜನರನ್ನುದ್ಧೇಶಿಸಿ ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಭೈರತಿ ಬಸವರಾಜ್ ಹಾಗೂ ಮಂಜುಳಾ ಲಿಂಬಾವಳಿ, ಮಾಜಿ ಶಾಸಕರಾದ ನಾಗೇಶ್, ಪೂರ್ಣಿಮಾ, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ವಿವಿಧ ಪ್ರಾಧಿಕಾರಿಗಳ ಅಧ್ಯಕ್ಷ ರಾಕೇಶ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


